Saturday, 23rd November 2024

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ಆಯ್ಕೆ

ನವದೆಹಲಿ: ಕಲೆ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ಕರ್ನಾಟಕದ ಇಬ್ಬರು ಸೇರಿ ದಂತೆ ಒಟ್ಟು 32 ಮಕ್ಕಳನ್ನು ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆ.ರಾಕೇಶಕೃಷ್ಣ (15) ಹಾಗೂ ಬೆಂಗಳೂರಿನ ವೀರಕಶ್ಯಪ್‌ (10) ಪುರಸ್ಕಾರಕ್ಕೆ ಆಯ್ಕೆಯಾಗಿರುವವರು.

ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜ.25ರಂದು ಸಂವಾದ ನಡೆಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ‘ಆವಿಷ್ಕಾರ ವಿಭಾಗದಲ್ಲಿ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.