Friday, 20th September 2024

ಸಿಂಘು ಗಡಿಯಲ್ಲಿ ಸಂಘರ್ಷ: ಲಾಠಿಚಾರ್ಜ್, ಪರಿಸ್ಥಿತಿ ಉದ್ವಿಗ್ನ

ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆಯೇ ದಾಳಿ ನಡೆದಿದೆ.

ಆಲಿಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಲ್ವಾರ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದವರನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ ಸಿಂಘು ಗಡಿಯಲ್ಲಿ ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಮಾರಾಮಾರಿ ನಡೆದಿದೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಅಶ್ರುವಾಯು ಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿದ್ದಾರೆ. ಒಟ್ಟಾರೆ ಸಿಂಘು ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.