Friday, 22nd November 2024

ಟೊಯೊಟ ಕಾರ್ಖಾನೆಯ ಮುಷ್ಕರ ನಿರತ ಕಾರ್ಮಿಕರ ಅಹವಾಲು ಆಲಿಸಿದ ಸಿದ್ದರಾಮಯ್ಯ

ಬಿಡದಿ: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು ಮತ್ತವರ ಕುಟುಂಬದವರನ್ನು ಇಂದು ಸಿದ್ದರಾಮಯ್ಯ ಅವರು ಭೇಟಿ ಮಾಡಿ ಅಹವಾಲು ಆಲಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಬಿಡದಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಬೈಕ್ ರ್ಯಾಲಿ ಮೂಲಕ ಬರ ಮಾಡಿಕೊಂಡರು. ಇದೇ ವೇಳೆ ದೂರವಾಣಿ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ದರು.

ಶಾಸಕರಾದ ರವಿ, ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಮಾಗಡಿಯ ಬಾಲಕೃಷ್ಣ ಮತ್ತಿರರು ಹಾಜರಿದ್ದರು.