ಈರೋಡ್: ಈರೋಡ್ನ ಕಾವೇರಿಪಟ್ಟಣಂ ಬಳಿ ಕಾರು ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ.
ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡು ಬಸ್ಗೆ ಹಿಂಬದಿಯಿಂದ ಓಮ್ನಿ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈರೋಡ್ ಜಿಲ್ಲೆಯ ಭವಾನಿಯಿಂದ ಸ್ನೇಹಿತರು ಬೆಂಗಳೂರಿನ ಒಂಡರ್ಲಾಗೆ ಹೊರಟಿದ್ದರು.
ಬಸ್ಸಿನಿಂದ ಇಳಿಯುತ್ತಿದ್ದ ಓರ್ವ ಪ್ರಯಾಣಿಕ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳು.
ಓಮ್ನಿಯಲ್ಲಿದ್ದ ಮೂವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.