Friday, 22nd November 2024

ಕೃಷಿ ಕಾನೂನಿನ ಬಗ್ಗೆ ರೈತರಿಗೆ ಅಗತ್ಯ ಜ್ಞಾನವಿಲ್ಲ: ಸಚಿವ ನರೇಂದ್ರ ಸಿಂಗ್ ತೋಮರ್

ನವದೆಹಲಿ : ಕೃಷಿ ಕಾನೂನುಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಾಗಿದೆ. ಅದರರ್ಥ ಸಮಸ್ಯೆ ಇದೆ ಎಂದಲ್ಲ. ಕೃಷಿ ಕಾನೂನುಗಳ ರೈತರಿಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು.

ರಾಜ್ಯಸಭಾ ಕಲಾಪದಲ್ಲಿ ಮಾತನಾಡಿ, ಕೃಷಿ ಕಾನೂನುಗಳನ್ನು ಜಾರಿಗೆ ತಂದರೆ ತಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳುತ್ತಾರೆ ಎಂದು ರೈತರನ್ನು ದಾರಿ ತಪ್ಪಿಸಲಾಗುತ್ತಿದೆ. ಯಾವುದೇ ವ್ಯಾಪಾರಿ ಯಾವುದೇ ರೈತನ ಭೂಮಿಯನ್ನು ಕಸಿದುಕೊಳ್ಳಲು ಅನುವು ಮಾಡಿಕೊಡುವಂತಹ ನಿಯಮ ಕಾಯ್ದೆಯಲ್ಲಿದ್ದೆರ ತಿಳಿಸಿ ಎಂದು ಸವಾಲೆಸಿದಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವುದು ನಮ್ಮ ಉದ್ದೇಶ. ಇದರಿಂದ ಜಿಡಿಪಿಗೆ ಕೃಷಿಯ ಕೊಡುಗೆ ವೇಗವಾಗಿ ಹೆಚ್ಚಾಗುತ್ತದೆ. ಕೃಷಿ ಕಾನೂನುಗಳು ಈ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ರೈತರ ಕಲ್ಯಾಣಕ್ಕೆ ಪ್ರಧಾನಿ ಬದ್ಧವಾಗಿದ್ದಾರೆ ಎಂದು ಅವರು ಹೇಳಿದರು.