Saturday, 23rd November 2024

ಉತ್ತರಾಖಂಡದ ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 32ಕ್ಕೆ ಏರಿಕೆ

ಡೆಹ್ರಾಡೂನ್‌: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ನದಿಯಲ್ಲಿ ಪ್ರವಾಹ ಉಂಟಾದ ಪರಿಣಾಮ ಇದು ವರೆಗೆ 32 ಜನರು ಮೃತಪಟ್ಟಿದ್ದು, ಸುಮಾರು 206 ಜನರು ನಾಪತ್ತೆಯಾಗಿದ್ದಾರೆ.

ತಪೋವನ- ವಿಷ್ಣುಗಡ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ 32 ಕಾರ್ಮಿಕರನ್ನು ರಕ್ಷಿಸಲಾಗಿದೆ. ಎನ್‌ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.

ಸುಮಾರು 13 ಹಳ್ಳಿಗಳು ಹೊರಗಿನ ಸಂಪರ್ಕ ಕಳೆದುಕೊಂಡಿವೆ. ಹಳ್ಳಿಗಳನ್ನು ಸಂಪರ್ಕಿಸುವ ಸೇತುವೆಗಳು ಕೊಚ್ಚಿ ಹೋಗಿದ್ದು, ಜನರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಲು ಹೆಲಿಕಾಪ್ಟರ್ ಬಳಸುವ ಅನಿವಾರ್ಯತೆ ಬಂದೊದಗಿದೆ.