Saturday, 23rd November 2024

ವಿಶ್ವ ಜೂನಿಯರ್ ಅಥ್ಲೆಟಿಕ್‌ ಹಿಮಾ ದಾಸ್​ ಪೊಲೀಸ್‌ ಡಿಎಸ್​ಪಿಯಾಗಿ ನೇಮಕ

ದಿಸ್ಪುರ: ಹಿಮಾ ದಾಸ್​ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾದ ಓಟಗಾರ್ತಿ ಆಕೆ.

ಹಿಮಾ ದಾಸ್​ರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್​ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ನೇಮಿಸಿದೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವಿಟ್ಟರ್​ನಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಅಸ್ಸಾಂನ ಸರ್ಬಾನಂದ ಸೋನೊವಾಲ್ ಸರ್ಕಾರವು ಹಿಮಾ ದಾಸ್​ ರನ್ನು ಡಿಎಸ್​ಪಿಯಾಗಿ ನೇಮಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಹಿಮಾ ಅವರು ಎನ್‌ಐಎಸ್ ಪಟಿಯಾಲದಲ್ಲಿ ಒಲಿಂಪಿಕ್ ಅರ್ಹತೆಗಾಗಿ ತರಬೇತಿ ಪಡೆಯುತ್ತಿದ್ದಾರೆ ಮತ್ತು ಭಾರತಕ್ಕಾಗಿ ಸ್ಪರ್ಧಿಸ ಲಿದ್ದಾರೆ. ನಮ್ಮ ಗಣ್ಯ ಕ್ರೀಡಾಪಟುಗಳು ವಿವಿಧ ಉದ್ಯೋಗಗಳಲ್ಲಿದ್ದಾರೆ ಮತ್ತು ಕ್ರೀಡೆಯನ್ನೂ ಮುಂದುವರಿಸುತ್ತಿದ್ದಾರೆ. ನಿವೃತ್ತಿ ನಂತರವೂ ಅವರು ಕ್ರೀಡೆಗಳನ್ನು ಉತ್ತೇಜಿಸುವುದನ್ನು ಮುಂದುವರಿಸುತ್ತಾರೆ.’ ಎಂದು ಸ್ಪಷ್ಟನೆ ನೀಡಿದ್ದಾರೆ.