ಯಾಂಗೊನ್: ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರು ಬುಧವಾರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಅಲ್ಲಿಯವರಿಗೆ ಬಂಧನದಲ್ಲೇ ಇರಿಸಲು ಸೇನಾಡಳಿತ ನಿರ್ಧರಿಸಿದೆ ಎಂದು ಸೂಕಿ ಪರ ವಕೀಲರು ತಿಳಿಸಿ ದ್ದಾರೆ.
ವಿಚಾರಣೆ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ, ಆದರೆ ವಿಚಾರಣೆ ನ್ಯಾಯಸಮ್ಮತವಾಗಿ ನಡೆಯುತ್ತದೆಯೇ ಎಂಬು ದನ್ನು ನೀವೇ ಊಹಿಸಿ’ ಎಂದು ವಕೀಲ ಖಿನ್ ಮಾಂಗ್ ಜಾವ್ ಮಾಧ್ಯಮದವರಿಗೆ ತಿಳಿಸಿದರು.
ಮ್ಯಾನ್ಮಾರ್‌ನ ಯಾಂಗೊನ್‌ನಲ್ಲಿ ಮಿಲಿಟರಿ ಆಡಳಿತವನ್ನು ವಿರೋಧಿಸಿ ಭಾನುವಾರ ರಾತ್ರಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆ ಯಲ್ಲಿ ನಗರದೆಲ್ಲೆಡೆ ಸೇನಾ ಶಸಾಸ್ತ್ರ ಪಡೆಯನ್ನು ನಿಯೋಜಿಸಲಾಗಿದ್ದು, ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ರಾಜಕೀಯ ನಾಯಕರು ಮತ್ತು ಕಾರ್ಯಕರ್ತರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.