ನವದೆಹಲಿ: ಹೊಸ ಖಾಸಗಿತನ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಾಟ್ಸಾಪ್ ಮತ್ತು ಫೇಸ್ ಬುಕ್ ಗೆ ನೋಟಿಸ್ ಜಾರಿ ಮಾಡಿದೆ. ಹಾಗೂ ಈ ಬಗ್ಗೆ ಟೆಕ್ ದೈತ್ಯರಿಂದ ಪ್ರತಿ ಕ್ರಿಯೆ ನೀಡುವಂತೆ ತಿಳಿಸಿದೆ.
ಭಾರತದಲ್ಲಿ ವಾಟ್ಸಾಪ್ ತನ್ನ ಹೊಸ ಗೌಪ್ಯತಾ ನೀತಿ ಜಾರಿಗೆ ತರದಂತೆ ನಿರ್ಬಂಧ ಹೇರಬೇಕು ಮತ್ತು ಐರೋಪ್ಯ ಒಕ್ಕೂಟ ಪ್ರದೇಶದಲ್ಲಿ ಬಳಕೆದಾರರಿಗೆ ಅನ್ವಯವಾಗುವ ಗೌಪ್ಯತಾ ನೀತಿ ಅನ್ವಯಿಸುವಂತೆ ನಿರ್ದೇಶನ ನೀಡ ಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.