Wednesday, 30th October 2024

ದೆಹಲಿ ಹಿಂಸಾಚಾರ: ಪ್ರಮುಖ ಆರೋಪಿಗಳ ಬಂಧನ

ಜಮ್ಮು: ಕಳೆದ ಜನವರಿ 26 ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಜಮ್ಮುವಿನಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ಸಿಸಿಬಿ ಅಧಿಕಾರಿಗಳು ಜಮ್ಮು ನಗರದ ಛಾಠಾ ಪ್ರದೇಶದ ನಿವಾಸಿ ಜಮ್ಮು ಮತ್ತು ಕಾಶ್ಮೀರ ಸಂಯುಕ್ತ ಕಿಸಾನ್‌ ರಂಗದ ಅಧ್ಯಕ್ಷ ಮೊಹಿಂದರ್ ಸಿಂಗ್‌(45 ವರ್ಷ) ಮತ್ತು ಜಮ್ಮುವಿನ ಗೋಲೆ ಗುರ್ಜಾಲ್ ನಿವಾಸಿ ಮನ್‌ದೀಪ್‌ ಸಿಂಗ್‌(23 ವರ್ಷ) ಎಂಬವರನ್ನು ಬಂಧಿಸಿದ್ದಾರೆ.

ಇಬ್ಬರೂ ಆರೋಪಿಗಳು ಪ್ರಕರಣದ ಪ್ರಮುಖ ಸಂಚುಕೋರರು ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಅಪರಾಧ ವಿಭಾಗದ ಪೊಲೀಸರು, ಜಮ್ಮು ಕಾಶ್ಮೀರ ಪೊಲೀಸರ ನೆರವಿನೊಂದಿಗೆ ಈ ಇಬ್ಬರು ಆರೋಪಿಗಳನ್ನು ಸೋಮವಾರ ರಾತ್ರಿ ಜಮ್ಮುವಿನಲ್ಲಿ ಬಂಧಿಸಿದ್ದಾರೆ.