ಬೆಳಗಾವಿ: ನನಗೆ ಪಕ್ಷದ ಹೈಕಮಾಂಡ್ ಯಾವುದೇ ರೀತಿಯ ತುರ್ತು ಬುಲಾವ್ ಆಗಲಿ ಅಥವಾ ಸಮಯ ಕೊಟ್ಟು ನನ್ನ ವಿಚಾರಣೆಗೆ ಕರೆದಿಲ್ಲ. ನಾನು ಯಾವುದೇ ನಾಯಕರ ಭೇಟಿಗೆ ಸಮಯ ಕೇಳಲಿಲ್ಲ ಎಂದು ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ತಮ್ಮ ಫೇಸ್‌ಬುಕ್ ಪೇಜ್ ನಲ್ಲಿ ಪೋಸ್ಟ್ ಹಾಕಿರು ತ್ತಾರೆ.
ಭಾನುವಾರ ರಾತ್ರಿ ವಿಜಯಪುರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿ. ಬಿ. ಎಸ್. ಇ. ನೊಂದಣಿ ಕಾರ್ಯ ನಿಮಿತ್ತ ತುರ್ತು ಕಾರ್ಯ ನಿಮಿತ್ತ ನವ ದೆಹಲಿಗೆ ಬಂದಿದ್ದೇನೆ. ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ ಬಲ್ಲ ಮೂಲಗಳಿಂದ ಎಂದು ಹೇಳಿಸಿ ಮತ್ತು ಬರೆಸಿ ರಾಜ್ಯದ ಜನರಲ್ಲಿ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಆತಂಕ ಉಂಟು ಮಾಡಿ ಯತ್ನಾಳನಿಗೆ ಮುಖಭಂಗ, ಬಿಗ್ ಶಾಕ್ ‘ಎಚ್ಚರಿಕೆ ಮತ್ತು ಬಾಯಿಗೆ ಬೀಗ ಎಂದು ವ್ಯವಸ್ಥಿತ ಅಪಪ್ರಚಾರ ಮಾಡುತ್ತಿದ್ದಾರೆ.
ನನ್ನ ಹೋರಾಟ ನನ್ನ ಆದರ್ಶ ಗುರು ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಹಾಗೂ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಸಂಕಲ್ಪದ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ಮುಕ್ತ ಭಾರತದ ಭಾಗವಾಗಿದೆ ಹೊರತು ವಯಕ್ತಿಕ ವ್ಯಕ್ತಿ ವಿರುದ್ಧ ಅಲ್ಲ. ನನ್ನ ಮಾತ್ರು ಪಕ್ಷದ ವಿರುದ್ಧ ಅಲ್ಲವೆ ಅಲ್ಲ.
ಕರ್ನಾಟಕ ರಾಜ್ಯದ ಇಬ್ಬರು ಸಚಿವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನನ್ನ ಬಗ್ಗೆ ಮತ್ತು ನಮ್ಮ ಪೂಜ್ಯರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ ಅದಕ್ಕೆ ಸೂಕ್ತ ಉತ್ತರ ಬಂದ ಮೇಲೆ ಕೊಡುತ್ತೇನೆ. ಹಿಂದೂ ಸಮಾಜದಲ್ಲಿಯ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ ಅಂಜುವುದಿಲ್ಲ, ಬಗ್ಗುವದು ಇಲ್ಲ ಮತ್ತು ಪಲಾಯನ ಇಲ್ಲವೆ ಇಲ್ಲ ಎಂದು ಸ್ಪಷ್ಟಪಡಿಸಿದರು.