Wednesday, 30th October 2024

ಆಯಿಲ್ ಟ್ಯಾಂಕರ್ ಕಾರಿಗೆ ಡಿಕ್ಕಿ: 7 ಮಂದಿ ಸಾವು

ಮಥುರಾ: ಆಯಿಲ್ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದೆ.

ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಮಥುರಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆಯಿಲ್ ಟ್ಯಾಂಕರ್ ಆಗ್ರಾ ಕಡೆಯ ಮಾರ್ಗದಲ್ಲಿ ಸಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಆಯಿಲ್ ಟ್ಯಾಂಕರ್ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಈ ಘರ್ಷಣೆಯ ಸಮಯದಲ್ಲಿ, ಟ್ಯಾಂಕರ್ ಮತ್ತು ಡಿವೈಡರ್ ನಡುವೆ ಕಾರು ಬಂದಿದೆ. ಕಾರಿನಲ್ಲಿ ಪ್ರಯಾಣಿಸು ತ್ತಿದ್ದವರೆಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.