Saturday, 23rd November 2024

ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ: ಪುದುಚೇರಿಯಲ್ಲಿ ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾದ ಬೆನ್ನಲ್ಲೇ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸಚಿವ ಸಂಪುಟ ಬುಧವಾರ ಅಂಕಿತ ಹಾಕಿದೆ.

ಕಾಂಗ್ರೆಸ್ ಪಕ್ಷದ ಐವರು ಶಾಸಕರು ಹಾಗೂ ಮೈತ್ರಿಪಕ್ಷ ಡಿಎಂಕೆ ಶಾಸಕರು ರಾಜೀನಾಮೆ ನೀಡಿದ ನಂತರ ನಾರಾಯಣ ಸ್ವಾಮಿ ನೇತೃತ್ವದ ಸರ್ಕಾರ ಬಹುಮತವಿಲ್ಲದೆ ಪತನಗೊಂಡಿತ್ತು. 26 ಸದಸ್ಯ ಬಲ ಹೊಂದಿದ್ದ ಪುದುಚೇರಿ ವಿಧಾನಸಭೆಯಲ್ಲಿ ಜನವರಿ ತಿಂಗಳಿನಲ್ಲಿ ಶಾಸಕರು ರಾಜೀನಾಮೆ ನೀಡುವ ಮೂಲಕ ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಇಕ್ಕಟ್ಟಿಗೆ ಸಿಲುಕತೊಡಗಿತ್ತು.

ಯಾವುದೇ ಪಕ್ಷ ಸರ್ಕಾರ ರಚಿಸಲು ಮುಂದಾಗದ ಹಿನ್ನೆಲೆಯಲ್ಲಿ ರಾಜ್ಯಪಾಲರ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರ ಪುದುಚೇರಿ ಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಅಂಕಿತ ಹಾಕಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.