Thursday, 19th September 2024

ಪ್ಲೈ ವುಡ್ ಫ್ಯಾಕ್ಟರಿಯಲ್ಲಿ ಸ್ಫೋಟ: ಆರು ಕಾರ್ಮಿಕರಿಗೆ ಗಾಯ

ಮಂಜೇಶ್ವರ: ಪ್ಲೈ ವುಡ್ ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟವೊಂದರಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ.  ಮಂಜೇಶ್ವರದಲ್ಲಿ ಘಟನೆ ಸಂಭವಿಸಿದೆ.

ಗಾಯಗೊಂಡವರು ಬಿಹಾರ ಮೂಲದ ಕಾರ್ಮಿಕರಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಫ್ಯಾಕ್ಟರಿಯ ಬಾಯ್ಲರ್ ನಲ್ಲಿ ಸ್ಫೋಟ ಉಂಟಾಗಿದೆ ಎನ್ನಲಾಗಿದೆ.

ಸ್ಪೋಟದ ಬಳಿಕ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಕಂಡುಬಂದಿದ್ದು, ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *