ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ಸತತ ಎಂಟನೇ ದಿನ ಭಾನುವಾರ ಕೂಡಾ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ 81.47 ರೂಪಾಯಿಗೆ ಮುಟ್ಟಿದೆ. ಫೆಬ್ರವರಿ 9ರಿಂದ ಸುಮಾರು 14 ಬಾರಿ ಇಂಧನ ದರ ಪರಿಷ್ಕರಣೆಯಾಗಿದ್ದು, ಒಟ್ಟಾರೆ, ಪೆಟ್ರೋಲ್ ಬೆಲೆ 4.22 ರು ಪ್ರತಿ ಲೀಟರ್ ಹಾಗೂ ಡೀಸೆಲ್ 4.34 ಪ್ರತಿ ಲೀಟರ್ ಏರಿಕೆ ಕಂಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 2.62% ಏರಿಕೆ ಕಂಡು 69.36 ಯುಎಸ್ ಡಾಲರ್ ಪ್ರತಿ ಬ್ಯಾರೆಲ್ ತಲುಪಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ.
ಪ್ರಮುಖ ನಗರಗಳಲ್ಲಿ ಇಂಧನ ದರ
ನಗರ – ಪೆಟ್ರೋಲ್- ಡೀಸೆಲ್
ದೆಹಲಿ: 91.17 ರೂ- 81.47 ರೂ
ಕೋಲ್ಕತ್ತಾ: 91.35 ರೂ- 84.35 ರೂ
ಮುಂಬೈ: 97.57 ರೂ – 88.60 ರೂ
ಚೆನ್ನೈ: 93.11ರೂ(-14ಪೈಸೆ) – 86.45 ರೂ(-13)
ಬೆಂಗಳೂರು: 94.22 ರೂ – 86.37 ರೂ