Friday, 22nd November 2024

ಲಡಾಖ್ ನಲ್ಲಿ ಲಘು ಭೂಕಂಪನ: 3.7 ರಷ್ಟು ತೀವ್ರತೆ

ನವದೆಹಲಿ : ಜಮ್ಮು-ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಲಘು ಭೂಕಂಪನ ಸಂಭವಿಸಿದೆ.

ಲಡಾಖ್ ನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7 ರಷ್ಟು ತೀವ್ರತೆ ದಾಖಲಾಗಿದೆ. ಜಮ್ಮುಕಾಶ್ಮೀರದಲ್ಲೂ ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ.  ಭೂಕಂಪನದಿಂದ ಯಾವುದೇ ಸಾವು ನೋವಿನ ವರದಿಯಾಗಿಲ್ಲ.