Friday, 1st November 2024

ಬಜೆಟ್‌: ಗದಗ ಜನರ ಭಾರೀ ನಿರೀಕ್ಷೆ

ಜಜೆಟ್‌ನಲ್ಲಿ ಗದಗಕ್ಕೆ ಹೊಸ ಯೋಜನೆ ನೀಡಲು ಆಗ್ರಹ ಸಾಸಲವಾಡ ಏತ ನೀರಾವರಿಗೆ ಹಣ ಬಿಡುಗಡೆ ಒತ್ತಾಯ

ವಿಶೇಷ ವರದಿ: ಅರುಣಕುಮಾರ ಹಿರೇಮಠ

ಗದಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಲಿರುವ 2021-22ನೇ ಸಾಲಿನ ಬಜೆಟ್ ಮೇಲೆ ಜಿಲ್ಲೆಯ ಜನರು
ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಹೊಸ
ಯೋಜನೆಗಳನ್ನು ಜಿಲ್ಲೆಗೆ ನೀಡಬೇಕೆಂಬ ಆಗ್ರಹವೂ ಇದೆ.

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ನಡುವೆ ಮಹದಾಯಿ ನೀರು ಹಂಚಿಕೆಯ ಕುರಿತಂತೆ ಮಹದಾಯಿ ನ್ಯಾಯಾಧೀಕರಣ ರಾಜ್ಯಕ್ಕೆ 13.5 ಟಿಎಂಸಿ ಅಡಿ ನೀು ಹಂಚಿಕೆ ಮಾಡಿರುವುದು. ಜತೆಗೆ ಕೇಂದ್ರ ಸಕಾರ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ರೈತರಲ್ಲಿ ಸಂತಸವನ್ನುಂಟು ಮಾಡಿದೆ.

ಬಜೆಟ್‌ನಲ್ಲಿ ಮಹದಾಯಿ ಯೋಜನೆ ಕಾಮಗಾರಿಗೆ 500 ಕೋಟಿ ರು. ಅನುದಾನ ಘೋಷಣೆ ಮಾಡಿದ್ದಾರೆ. ಆದರೆ, ಈ ಅನು
ದಾನ ಸಾಲದು. ಹೀಗಾಗಿ ಹೆಚ್ಚುವರಿ ಅನುದಾನ ಘೋಷಣೆ ಮಾಡಬೇಕು ಎಂಬ ಆಗ್ರಹ ಜಿಲ್ಲೆಯಲ್ಲಿದೆ. ಯೋಜನೆಯ ಕೊನೆಯ ಗ್ರಾಮಕ್ಕೆ ಮಲಪ್ರಭೆ ಹರಿಯ ಬೇಕೆಂದರೆ ಕಾಲುವೆ, ಉಪಕಾಲುವೆ ದುರಸ್ತಿ ಆಗಬೇಕು. ಇದಕ್ಕಾಗಿ ಇನ್ನಷ್ಟು ಅನುದಾನ ಬಿಡುಗಡೆ ಮಾಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ. ಅಲ್ಲದೇ, ಹಿಂದಿನ ವರ್ಷ ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ವಿವಿಧ ಏತ ನೀರಾವರಿ ಯೋಜನೆಗಳಿಗೆ 5 ಸಾವಿರ ಕೋಟಿ ರು. ಅನುದಾನವನ್ನು ಸಿಎಂ ಘೋಷಣೆ ಮಾಡಿದ್ದರು. ಇದರಲ್ಲಿ ಸಿಂಗಟಾ ಲೂರು ಏತ ನೀರಾವರಿ ಯೋಜನೆ ಕೂಡ ಒಂದಾಗಿತ್ತು. ಆದರೆ, ಈ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬುದು ಗೊತ್ತಾಗಲಿಲ್ಲ. ಕೋವಿಡ್ ವ್ಯಾಪಿಸಿದ್ದರಿಂದ ಅನುದಾನ ಬಿಡುಗಡೆಯಾಗಲಿಲ್ಲ. ಇದರಿಂದ ಯೋಜನೆಯ ನಿರಾಶ್ರಿತರ ಪರಿಹಾರ ಇನ್ನೂ ಮರೀಚಿಕೆಯಾಗಿದೆ.

ನಾನಾ ಯೋಜನೆಗಳ ಅನುದಾನಕ್ಕೆ ಒತ್ತಾಯ
ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಎಂದು ಘೋಷಣೆಯಾಗಿದೆ ಹೊರತು ಪ್ರಾಧಿಕಾರ ಕೆಲಸ ಕಾರ್ಯಗಳು ನಡೆದಿಲ್ಲ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅವಕಾಶಗಳಿದ್ದು, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚು ಅನುದಾನ ಮೀಸಲಿಡು ವುದು. ಲಕ್ಷ್ಮೇಶ್ವರ, ಗಜೇಂದ್ರಗಡ ನೂತನ ತಾಲೂಕುಗಳ ಮೂಲ ಸೌಕರ್ಯ ಒದಗಿಸಲು ವಿಶೇಷ ಅನುದಾನ ನೀಡುವುದು.

ತಾಲೂಕು ಕೇಂದ್ರಕ್ಕೆ ಅಗತ್ಯವಿರುವ ಕಚೇರಿಗಳ ಸ್ವಂತ ಕಟ್ಟಡ ಸೇರಿ ಇತರ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಬಿಡುಗಡೆ
ಮಾಡುವುದು. ಜಿಲ್ಲೆಯಲ್ಲಿ ಸ್ನಾತಕೋತ್ತರ ಕೇಂದ್ರ ಕಟ್ಟಡಕ್ಕೆ ಅನುದಾನ ಘೋಷಣೆ ಮಾಡಬೇಕು. ಜಿಲ್ಲೆಯ ವಿವಿಧೆಡೆ ಜಿಂಕೆ ಹಾವಳಿ ಹೆಚ್ಚಾಗಿದ್ದು, ಈ ವರ್ಷವಾದರೂ ಜಿಂಕೆ ವನ ನಿರ್ಮಿಸುವ ಕುರಿತು ಕ್ರಮಕೈಗೊಳ್ಳಬೇಕು. 140 ಕೋಟಿ ರು. ವೆಚ್ಚದ
ಸಾಸಲವಾಡ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಬೇಕು ಎಂದು ಜಿಲ್ಲೆಯ ಜನರು ಒತ್ತಾಯಿಸುತ್ತಿದ್ದಾರೆ.

ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಪ್ರಸ್ತಾವನೆ
ಇತ್ತೀಚೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ರಾಜ್ಯ ಮುಂಗಡಪತ್ರದ ಪೂರ್ವಸಭೆಯಲ್ಲಿ ಭಾಗವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ಜಿಲ್ಲೆಗೆ 10 ಕೋಟಿ ರು. ನೀಡಬೇಕು. ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು, ವರ್ತಕರು ಮತ್ತು ದಲಾಲರಿಗೆ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಮಂಡಳಿಯಲ್ಲಿ ಪ್ರತ್ಯೇಕ ಪ್ರಾತಿನಿಧ್ಯ ಕಲ್ಪಿಸಿ ಕೊಡಬೇಕು. ಉದ್ಯಮಿಗಳ ಅಭಿವೃದ್ಧಿಗಾಗಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಬೇಕು. ಕೃಷಿ ಆಧಾರಿತ ಉದ್ದಿಮೆಗಳು ಹಾಗೂ ಫರ್ಟಿಲೈರ್ಜ ಆರಂಭಿಸಬೇಕು. ಕೃಷಿ ಆಧಾರಿತ ಉತ್ಪನ್ನಗಳ ಫುಡ್ ಪಾರ್ಕ್ ಸ್ಥಾಪಿಸಬೇಕು.

ಬೃಹತ್ ಉದ್ದಿಮೆಗಳನ್ನು ಸ್ಥಾಪನೆ ಮಾಡಲು ಕೆಐಎಡಿಬಿಯಿಂದ ಕಡಿಮೆ ದರದಲ್ಲಿ ನಿವೇಶನ ನೀಡಬೇಕು. ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಗಜೇಂದ್ರಗಡ ತಾಲೂಕು ರಚನೆಯಾಗಿದ್ದು, ಈ ಎರಡು ತಾಲೂಕುಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಸಂಸ್ಥೆ ಅಧ್ಯಕ್ಷ ಆನಂದ ಪೋತ್ನಿಸ್, ವೀರೇಶ ಕೂಗು ಮತ್ತಿತರರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.