Monday, 25th November 2024

ಗದ್ದಲ, ಕೋಲಾಹಲ, ಆರೋಪ-ಪ್ರತ್ಯಾರೋಪ: ಮುಂದೂಡಲ್ಪಟ್ಟ ರಾಜ್ಯಸಭಾ ಕಲಾಪ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಸೋಮವಾರ ಆರಂಭವಾಗಿ, ರಾಜ್ಯಸಭಾ ಕಲಾಪ ತೀವ್ರ ಗದ್ದಲ, ಕೋಲಾಹಲ, ಆರೋಪ-ಪ್ರತ್ಯಾರೋಪಗಳಲ್ಲಿ ಸಾಗಿದ್ದರಿಂದ ಸಭಾಪತಿಗಳು ಮಧ್ಯಾಹ್ನ 1 ಗಂಟೆಗೆ ಮುಂದೂಡಿದರು.

ಇಂಧನ ಬೆಲೆ ಹೆಚ್ಚಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿಜೆ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯಬೇಕೆಂದು ನೊಟೀಸ್ ನೀಡಿದರು.

ಪ್ರಶ್ನೋತ್ತರ ಅವಧಿಯನ್ನು ಬಯಸದಿದ್ದರೆ, ಜನರನ್ನು ವಂಚಿಸಲು ಬಯಸಿದರೆ, ನಾನು ಸದನ ಮುಂದೂಡುತ್ತೇನೆ. ದಯವಿಟ್ಟು ಆಸನಕ್ಕೆ ಹೋಗಿ ಕುಳಿತುಕೊಳ್ಳಿ, ಪ್ರಜಾಪ್ರಭುತ್ವವನ್ನು ಅಣಕಿಸಬೇಡಿ ಎಂದರು. ವಿರೋಧ ಪಕ್ಷದ ನಾಯಕರ ಗದ್ದಲ, ಕೋಲಾಹಲ ನಿಲ್ಲದಾಗ ಸಭಾಪತಿಗಳು ಕಲಾಪವನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಿದರು. ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಏಪ್ರಿಲ್ 8ಕ್ಕೆ ಮುಕ್ತಾಯಗೊಳ್ಳಲಿದೆ.