ಬೆಂಗಳೂರು : ಕೊರೋನಾ ವಿರುದ್ಧದ ಹೋರಾಟಕ್ಕಾಗಿ, ನಾನು ಮಾತ್ರವಲ್ಲ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ರಜೆ ನೀಡುವುದಿಲ್ಲ. 50 ದಿನಗಳ ವರೆಗೆ ರಜೆ ರದ್ದು ಪಡಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಸಚಿವರು ಈ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಮುನ್ಸೂಚನೆಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು ಪಡಿಸಲಾಗಿದೆ. ಕೊರೋನಾ ಎದುರಿಸಲು ಸಿಬ್ಬಂದಿ ರಜೆ ರದ್ದು ಪಡಿಸಲಾಗಿದೆ. ನಾನೂ ಸೇರಿದಂತೆ ಯಾರಿಗೂ ರಜೆ ಇಲ್ಲ ಎಂದರು.
ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಷ್ಟೇ ಅಲ್ಲ, ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ರಜೆ ಕೂಡ ರದ್ದು ಪಡಿಸ ಲಾಗುತ್ತಿದೆ ಎಂಬುದಾಗಿ ತಿಳಿಸಿದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ