ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರ ಹೆಚ್ಚಳವಾಗುತ್ತಿದ್ದು, ಮಧ್ಯಪ್ರದೇಶದಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಮಧ್ಯಪ್ರದೇಶದ ಇಂದೋರ್, ಭೋಪಾಲ್, ಜಬಲ್ ಪುರ್ ನಲ್ಲಿ ಇದೇ ಭಾನುವಾರದಿಂದ ಸಂಡೇ ಲಾಕ್ ಡೌನ್ ಜಾರಿಯಾಗಲಿದೆ. ಪ್ರತಿ ಭಾನುವಾರ ಲಾಕ್ ಡೌನ್ ಇರಲಿದ್ದು, ಮುಂದಿನ ಆದೇಶದ ವರೆಗೆ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ.
ಶನಿವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ ವರೆಗೆ ನೈಟ್ ಕರ್ಪ್ಯೂ ಇರಲಿದೆ. ಲಾಕ್ ಡೌನ್, ಕರ್ಪ್ಯೂ ನಡುವೆ ಜನರ ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸರ್ಕಾರ ಹೇಳಿದೆ.