Wednesday, 30th October 2024

ಜಲಶಕ್ತಿ ಅಭಿಯಾನ ‘ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವಿಶ್ವ ಜಲ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಜಲಶಕ್ತಿ ಅಭಿಯಾನ, ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.

ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ,  ದೇಶದ ಪ್ರತಿಯೊಬ್ಬ ನಾಗರಿಕರೂ ಭಾಗವಹಿಸುವಂತೆ ಕರೆ ನೀಡಿದರು. ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನೀರಿನ ಸಮಸ್ಯೆಯೂ ಹೆಚ್ಚುತ್ತಿದೆ. ಹೀಗಾಗಿ, ದೇಶದ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಜೀವನ್ ಮಿಷನ್ ಆರಂಭವಾದ ನಂತರ, ‘ಸುಮಾರು 4 ಕೋಟಿ ಹೊಸ ಕುಟುಂಬಗಳು ಇಷ್ಟು ಕಡಿಮೆ ಅವಧಿಯಲ್ಲಿ ಸಂಪರ್ಕ ಹೊಂದಿವೆ. ಒಂದೂವರೆ ವರ್ಷದ ಹಿಂದೆ ನಮ್ಮ ದೇಶದ 19 ಕೋಟಿ ಗ್ರಾಮೀಣ ಕುಟುಂಬಗಳ ಪೈಕಿ, 3.5 ಕೋಟಿ ಕುಟುಂಬಗಳು ಮಾತ್ರ ನಲ್ಲಿಯಿಂದ ನೀರು ಪಡೆಯುತ್ತಿದ್ದರು ಎಂದು ತಿಳಿಸಿದ್ದಾರೆ.

ದೇಶದಲ್ಲಿ ಜಲ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಜಲ ದಿನದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜಲಶಕ್ತಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹ ಭಾಗಿಯಾಗಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily