ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಅವರ ಜಾಮೀನು ಅರ್ಜಿಯನ್ನು ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
ವೈದ್ಯಕೀಯ ಕಾರಣಗಳನ್ನು ಆಧರಿಸಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೆಚ್ಚುವರಿ ಸೆಷನ್ ನ್ಯಾಯಾಧೀಶ ತಿರಸ್ಕರಿಸಿದರು.
ಜೆಸ್ಯೂಟ್ ಪಾದ್ರಿ ಮತ್ತು ಹೋರಾಟಗಾರರಾಗಿದ್ದ ಸ್ಟಾನ್ ಸ್ವಾಮಿಯನ್ನು 2020ರ ಅಕ್ಟೋಬರ್‌ನಲ್ಲಿ ರಾಂಚಿಯಲ್ಲಿ ಬಂಧಿಸ ಲಾಯಿತು. ನಂತರ ನವೀ ಮುಂಬೈನ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.
ಸ್ವಾಮಿ ಪರ ವಕೀಲರು, ಪಾರ್ಕಿನ್ಸನ್ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ