ನವದೆಹಲಿ : ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾ.ಎನ್.ವಿ.ರಮಣ ಅವರನ್ನು ನೇಮಕ ಮಾಡುವಂತೆ ಸಿಜೆಐ ಎಸ್ ಎ ಬೊಬ್ಡೆ ಕೇಂದ್ರ ಸರ್ಕಾರಕ್ಕೆ ಪತ್ರದಲ್ಲಿ ತಿಳಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತಿಯಾಗಲಿದ್ದಾರೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡುವಂತೆ ಶಿಫಾರಸು ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ