ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿ ಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರ ವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ಉಲ್ಲಂಘಿಸಿ ಯಾರಾದರೂ ಶಾಲೆ ಆರಂಭಿಸಿ ದರೆ ಕಠಿಣ ಕ್ರಮ ಕೈಗೊಳ್ಳುವಂತೆ ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.