ನವದೆಹಲಿ: ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾ.26ರಂದು ಭಾರತ್ ಬಂದ್ ಗೆ ಕರೆ ನೀಡಿವೆ.
ಕಳೆದ ವರ್ಷದ ನವೆಂಬರ್ 26ರಿಂದ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ದೆಹಲಿ ಗಡಿಯಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದವು. ಮಾರ್ಚ್ 26ರ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಭಾರತ್ ಬಂದ್ ಗೆ ರೈತ ಸಂಘಟನೆಗಳು ಕರೆ ಕೊಟ್ಟಿರುವುದಾಗಿ ತಿಳಿಸಿದೆ.
ಪ್ರತಿಭಟನೆ ಸಂದರ್ಭದಲ್ಲಿ ದೇಶಾದ್ಯಂತ ಎಲ್ಲಾ ರಸ್ತೆ, ರೈಲು ಸಂಚಾರ, ಮಾರುಕಟ್ಟೆ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಬಂದ್ ಮಾಡಲಾಗುವುದು. ಪ್ರತಿಭಟನೆ ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ರೈತ ಮುಖಂಡ ದರ್ಶನ್ ಪಾಲ್ ಮನವಿ ಮಾಡಿಕೊಂಡಿದ್ದಾರೆ.
ಭಾರತ್ ಬಂದ್ ಶಾಂತಿಯುತವಾಗಿ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ಯಿಂದ ಇರಬೇಕು ಎಂದು ವಿನಂತಿಸಿಕೊಂಡಿರುವುದಾಗಿ ವರದಿ ಹೇಳಿದೆ.