Friday, 20th September 2024

ಟಾಸ್‌ ಗೆದ್ದ ಬಟ್ಲರ್‌, ಬೌಲಿಂಗ್‌ ಆಯ್ಕೆ

ಪುಣೆ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಗೆದ್ದು ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ ಟಾಸ್ ಸೋತಿದ್ದು, ಬ್ಯಾಟಿಂಗ್‌ ಮಾಡಲಿದೆ. ಪ್ರವಾಸಿಗರ ಪೈಕಿ, ತಂಡವನ್ನು ವಿಕೆಟ್‌ ಕೀಪರ್‌ ಜೋಸ್‌ ಬಟ್ಲರ್‌ ಮುನ್ನಡೆಸಲಿದ್ದಾರೆ.

ಶ್ರೇಯಸ್ ಅಯ್ಯರ್ ಬದಲಿಗೆ ರಿಷಭ್ ಪಂತ್ ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕಳೆದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಪೆಟ್ಟು ಮಾಡಿಕೊಂಡಿದ್ದ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಬದಲಿಗೆ ಕೀಪರ್ ಬಟ್ಲರ್ ನಾಯಕತ್ವ ವಹಿಸಿಕೊಂಡಿದ್ದಾರೆ. ಮಾರ್ಗನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್, ಮತ್ತು ಮಾರ್ಕ್ ವುಡ್ ಬದಲಿಗೆ ಡೇವಿಡ್ ಮಲಾನ್ ಮತ್ತು ಲಿಯಾಮ್ ಲಿವಿಂಗ್ ಸ್ಟೋನ್, ರೀಸ್ ಟಾಪ್ಲೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ : ರೋಹಿತ್‌ ಶರ್ಮ, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ (ನಾಯಕ), ಕೆ.ಎಲ್‌. ರಾಹುಲ್‌, ರಿಷಭ್ ಪಂತ್(ಕೀ)‌, ಹಾರ್ದಿಕ್‌ ಪಾಂಡ್ಯ, ಕೃಣಾಲ್‌ ಪಾಂಡ್ಯ, ಶಾರ್ದೂಲ್‌ ಠಾಕೂರ್‌, ಭುವನೇಶ್ವರ್‌ ಕುಮಾರ್‌, ಪ್ರಸಿದ್ಧ್ ಕೃಷ್ಣ, ಕುಲದೀಪ್‌ ಯಾದವ್‌.

ಇಂಗ್ಲೆಂಡ್‌: ಜಾಸನ್‌ ರಾಯ್‌, ಜಾನಿ ಬೇರ್‌ಸ್ಟೊ, ಡೇವಿಡ್‌ ಮಲಾನ್‌, ಜಾಸ್‌ ಬಟ್ಲರ್‌ (ನಾಯಕ/ಕೀ), ಬೆನ್‌ ಸ್ಟೋಕ್ಸ್‌, ಲಿಯಮ್‌ ಲಿವಿಂಗ್‌ಸ್ಟೋನ್‌, ಮೊಯಿನ್‌ ಅಲಿ, ಸ್ಯಾಮ್‌ ಕರನ್‌, ಟಾಮ್‌ ಕರನ್‌, ಆದಿಲ್‌ ರಶೀದ್‌,‌ ರೀಸ್ ಟಾಪ್ಲೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily