ಲಕ್ನೋ: ಕೊರೋನಾ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 11ರವೆರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ ಗಳನ್ನು ಮುಚ್ಚಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.
ಏ.11ರವರೆಗೆ ಆನ್ ಲೈನ್ ತರಗತಿ ನಡೆಸಲು ಉತ್ತರ ಪ್ರದೇಶದ 200 ಅನುದಾನರಹಿತ ಖಾಸಗಿ ಶಾಲೆಗಳು ನಿರ್ಧರಿಸಿವೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸೋಂಕಿನ ಪ್ರಮಾಣ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕಾರಣ ಸಣ್ಣ ವಯಸ್ಸಿನ ಮಕ್ಕಳ ಭವಿಷ್ಯದ ಜೊತೆ ಆಟವಾಡ ಬಾರದು ಎಂದು ನಿರ್ಧರಿಸಿದೆ. ಕಳೆದ ವರ್ಷ ಕೂಡ ಇದೇ ಸಮಯದಲ್ಲಿ ಕೊರೋನಾ ಸೋಂಕು ಗರಿಷ್ಠ ಪ್ರಮಾಣದಲ್ಲಿ ಏರಿಕೆ ಯಾಗಿತ್ತು.
ಸಿಎಂ ಯೋಗಿ ಆದಿತ್ಯನಾಥ್ ಶುಕ್ರವಾರ ಅಧಿಕಾರಿಗಳ ಜೊತೆಗೆ ಪರಿಶೀಲನಾ ಸಭೆ ನಡೆಸಿದ ನಂತರ ಶಾಲೆಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಳ್ಳಲಾಗಿದೆ.