Saturday, 23rd November 2024

ಕೊರೊನಾ ಅಬ್ಬರ: ಮತ್ತೆ 96,517 ಮಂದಿಗೆ ವೈರಸ್ ಸೋಂಕು ದೃಢ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 96,517 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಸೋಮವಾರ ಒಂದೇ ದಿನ 445 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕಿತರಿದ್ದು, 47,288 ಹೊಸ ಪ್ರಕರಣಗಳು ವರದಿಯಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 741830 ಇದ್ದು, ಇಲ್ಲಿಯವರೆಗೆ 1,16,82,136 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 1,65,101 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.