Saturday, 23rd November 2024

18 ವರ್ಷ ದಾಟಿದವರು ಧರ್ಮದ ಆಯ್ಕೆಗೆ ಸ್ವತಂತ್ರರು: ಸುಪ್ರೀಂ ಕೋರ್ಟ್‌

ನವದೆಹಲಿ: ಮೂಢನಂಬಿಕೆ, ಪ್ರಚೋದನೆ, ಮಾಟಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ಈ ಬಗ್ಗೆ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್​, 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿಯು ತನ್ನ ಧರ್ಮ ವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂಬುದಕ್ಕೆ ಯಾವುದೇ ಕಾರಣವಿಲ್ಲ, 18 ವರ್ಷ ದಾಟಿದರೆ ಧರ್ಮ ಆಯ್ಕೆಗೆ ಅವರು ಸ್ವತಂತ್ರರು ಎಂದು ಹೇಳಿದೆ.

ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ ಅವರು ಈ ಅರ್ಜಿ ಸಲ್ಲಿಸಿದ್ದರು. ಧರ್ಮದ ದುರುಪಯೋಗ ತಡೆಯಲು ಸಮಿತಿ ನೇಮಿಸಿ ಮತಾಂತರ ಕಾನೂನು ಜಾರಿಗೆ ತರುವ ಸಾಧ್ಯತೆ ಗಳನ್ನು ಕಂಡುಹಿಡಿಯಲು ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಕಳೆದ ಕೆಲ ವರ್ಷಗಳಿಂದ ಲವ್​ ಜಿಹಾದ್​ ಪ್ರಕರಣಗಳು ಹೆಚ್ಚುತ್ತಲೇ ಸಾಗಿವೆ. ಎಷ್ಟೋ ಹೆಣ್ಣುಮಕ್ಕಳು ಆಮಿಷಕ್ಕೆ ಬಲಿಯಾಗಿ ಮತಾಂತರಗೊಂಡು ನಂತರ ಚಿತ್ರಹಿಂಸೆ ಪಡುತ್ತಿರುವ, ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ. ಇದೇ ಕಾರಣಕ್ಕೆ ಕೆಲವು ರಾಜ್ಯ ಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಇಂಥದ್ದೊಂದು ಪ್ರಕರಣ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು.

ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಲ್ಲ, ಬದಲಿಗೆ ಪಬ್ಲಿಸಿಟಿಗಾಗಿ ಸಲ್ಲಿಸಿರುವ ಅರ್ಜಿಯಂತಿದೆ ಎಂದು ಕೋರ್ಟ್​ ಅಭಿಪ್ರಾಯ ಪಟ್ಟಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily