Saturday, 23rd November 2024

ಡಾಲರ್ ಅಕ್ರಮ ಸಾಗಣೆ ಪ್ರಕರಣ: ಐದು ಗಂಟೆ ವಿಚಾರಣೆಗೊಳಪಟ್ಟ ಕೇರಳ ಸ್ಪೀಕರ್

ತಿರುವನಂತಪುರಂ: ಡಾಲರ್ ಅಕ್ರಮ ಸಾಗಣೆ ಪ್ರಕರಣದಲ್ಲಿ ಕೇರಳ ಸ್ಪೀಕರ್ ರನ್ನು ಕಸ್ಟಮ್ಸ್ ಅಧಿಕಾರಿಗಳು ಐದು ಗಂಟೆಗಳ ವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಗೆ ಹಲವು ಬಾರಿ ನೊಟೀಸ್ ಜಾರಿಗೊಳಿಸಲಾಗಿತ್ತಾದರೂ ಆರೋಗ್ಯದ ಕಾರಣ ಗಳನ್ನು ನೀಡಿ ವಿಚಾರಣೆಗೆ ಬಂದಿರಲಿಲ್ಲ. ಈ ಕಾರಣದಿಂದಾಗಿ ಕಸ್ಟಮ್ಸ್ ಅಧಿಕಾರಿಗಳೇ ಸ್ಪೀಕರ್ ಅಧಿಕೃತ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

ಅಗತ್ಯ ಎದುರಾದಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ಕಸ್ಟಮ್ಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ನಡುವೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬ ವದಂತಿ ಹಬ್ಬಿದ್ದ ಹಿನ್ನೆಲೆಯಲ್ಲಿ ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆ ವದಂತಿಯ ಬಗ್ಗೆ ಸ್ಪಷ್ಟನೆ ನೀಡಿದರಾದರೂ ಕಸ್ಟಮ್ಸ್ ಅಧಿಕಾರಿಗಳ ವಿಚಾರಣೆ ಬಗ್ಗೆ ಮಾತನಾಡಲಿಲ್ಲ.

ಸ್ವಪ್ನ ಸುರೇಶ್ ಹಾಗೂ ಸರಿತ್ ಪಿಎಸ್ ಎಂಬುವವರ ಹೇಳಿಕೆಯಿಂದಾಗಿ ಡಾಲರ್ಸ್ ಅಕ್ರಮ ಸಾಗಣೆ ಪ್ರಕರಣದಲ್ಲಿ ಸ್ಪೀಕರ್ ವಿರುದ್ಧ ಆರೋಪ ಕೇಳಿಬಂದಿತ್ತು. 2019 ರಲ್ಲಿ ನಡೆದ ಈ ಘಟನೆಯಲ್ಲಿ ಯುಎಇ ರಾಯಭಾರಿ ಕಚೇರಿ ಅಧಿಕಾರಿ 1.9 ಲಕ್ಷ ಯುಎಸ್ ಡಾಲರ್ ನ್ನು ಕಳ್ಳಸಾಗಣೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.