Saturday, 23rd November 2024

ಐಪಿಎಲ್‌ ಪಂದ್ಯ ವೀಕ್ಷಿಸಲು ಕೋವಿಡ್-19 ನೆಗೆಟಿವ್ ವರದಿ ಸಲ್ಲಿಸಿ: ಎಂಸಿಎ

ಮುಂಬೈ: ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಿದ್ದರೂ, ಬಿಸಿಸಿಐ ಅಧಿಕಾರಿಗಳು ಪಂದ್ಯವನ್ನು ಕ್ರೀಡಾಂಗಣದಲ್ಲೇ ವೀಕ್ಷಿಸುತ್ತಿದ್ದಾರೆ.

ಚೆನ್ನೈನಲ್ಲಿ ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್-ಆರ್‌ಸಿಬಿ ನಡುವಿನ ಮೊದಲ ಪಂದ್ಯವನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಷಾ ಮತ್ತಿತರರು ಎಂಎ ಚಿದಂಬರಂ ಕ್ರೀಡಾಂಗಣದೊಳಗೆ ಕುಳಿತು ವೀಕ್ಷಿಸಿದ್ದರು.

ಶನಿವಾರದಿಂದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳನ್ನು ವೀಕ್ಷಿಸಲು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸದಸ್ಯರು ಕೋವಿಡ್-19 ನೆಗಟಿವ್ ವರದಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ತಿಳಿಸಿದೆ.

ಎಲ್ಲ ಪದಾಧಿಕಾರಿಗಳು ವಾಂಖೆಡೆ ಕ್ರೀಡಾಂಗಣಕ್ಕೆ ಆಗಮಿಸುವಾಗ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಪಂದ್ಯದ ದಿನಕ್ಕೆ 48 ಗಂಟೆ ಮುನ್ನ ನಡೆಸಲಾದ ಪರೀಕ್ಷೆಯ ನೆಗೆಟಿವ್ ವರದಿ ಇದ್ದರೆ ಮಾತ್ರ ಕ್ರೀಡಾಂಗಣದೊಳಗೆ ಪ್ರವೇಶ ನೀಡಲಾಗುವುದು’ ಎಂದು ಎಂಸಿಎ ಕಾರ್ಯದರ್ಶಿ ತಿಳಿಸಿದ್ದಾರೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರದಿಂದ ಏಪ್ರಿಲ್ 25ರವರೆಗೆ ಒಟ್ಟು 10 ಪಂದ್ಯಗಳು ನಡೆಯಲಿವೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily