Saturday, 23rd November 2024

ಏಮ್ಸ್ ಆಸ್ಪತ್ರೆಯಿಂದ ರಾಷ್ಟ್ರಪತಿ ಕೋವಿಂದ್ ಬಿಡುಗಡೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಏಮ್ಸ್ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.

ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಕೋವಿಂದ್ ಕಳೆದ 20 ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು. ಚಿಕಿತ್ಸೆ ಪಡೆದು ಗುಣಮುಖರಾಗಿರುವ ಅವರು ವೈದ್ಯರಿಗೆ ಧನ್ಯವಾದ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಯ ನಂತರ ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನನ್ನ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ನೀಡಿದ ಆರೈಕೆಗೆ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.