Friday, 22nd November 2024

ಪೆಟ್ರೋಲ್, ಡಿಸೇಲ್‌ ಪ್ರತಿ ಲೀಟರ್‌ಗೆ…ಇಂತಿದೆ ವಿವರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿವೆ.

ನವದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 16 ಪೈಸೆ ಇಳಿಕೆಗೊಂಡು 90.40 ರೂ. ತಲುಪಿದ್ದು, ಡೀಸೆಲ್ ದರ ಪ್ರತಿ ಲೀಟರ್‌ಗೆ 14 ಪೈಸೆ ಕಡಿತಗೊಂಡು 80.73 ರೂ.ಗೆ ತಲುಪಿದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸು ತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಂತಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.40 ರೂ. ಮತ್ತು ಡೀಸೆಲ್ ದರ 80.73 ರೂ., ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 90.62 ರೂ. ಮತ್ತು ಡೀಸೆಲ್ ದರ 83.61 ರೂ., ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.83 ರೂ. ಮತ್ತು ಡೀಸೆಲ್ ದರ 87.81 ರೂ., ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.43 ರೂ. ಮತ್ತು ಡೀಸೆಲ್ ದರ 85.60 ರೂ., ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 92.43 ರೂ. ಮತ್ತು ಡೀಸೆಲ್ ದರ 85.75 ರೂ. ಇದೆ.