ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.
ಏ.10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ.
ಹರಿದ್ವಾರ, ಡೆಹ್ರಾಡೂನ್, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ