ರಾಯಪುರ: ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ಕು ಮಂದಿ ಕರೋನಾ ಸೋಂಕು ಪೀಡಿತರು ಮೃತ ಪಟ್ದಿದ್ದಾರೆ.
ಶನಿವಾರ ರಾತ್ರಿ ಘಟನೆ ಸಂಭವಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಯ ಪುರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಗರದ ಎಲ್ಲಾ ಕೋವಿಡ್ ಚಿಕಿತ್ಸಾ ಕೇಂದ್ರ ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳ ತಪಾಸಣೆ ನಡೆಸುವಂತೆಯೂ ಸೂಚಿಸಿದ್ದಾರೆ.
‘ಒಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟರೆ, ಮೂವರು ಉಸಿರುಗಟ್ಟಿ ಮೃತ ಪಟ್ದಿದ್ದಾರೆ’. ಆಸ್ಪತ್ರೆಯ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸ ಲಾಗಿದೆ ಎಂದಿದ್ದಾರೆ. ಫ್ಯಾನ್‌ನಲ್ಲಿ ಶಾರ್ಟ್ ಸರ್ಕೀಟ್ ಆಗಿದ್ದು, ಬೆಂಕಿಗೆ ಕಾರಣವಾಗಿ, ವೇಗವಾಗಿ ಇತರ ವಾರ್ಡ್‌ಗಳಿಗೆ ವ್ಯಾಪಿಸ ತೊಡಗಿದೆ.
ಐಸಿಯುನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಮೇಲ್ವಿಚಾರಕರೊಬ್ಬರು ಆಸ್ಪತ್ರೆ ಸಿಬ್ಬಂದಿಗೆ ಎಚ್ಚರಿಸಿದ್ದಾರೆ. ಅಗ್ನಿ ಶಾಮಕ ದಳ ಮತ್ತು ಆಸ್ಪತ್ರೆ ಸಿಬ್ಬಂದಿ ರೋಗಿಗಳ ರಕ್ಷಣೆಗೆ ಧಾವಿಸಿದ್ದಾರೆ. ಬೆಂಕಿಯನ್ನು ಶಮನಗೊಳಿಸಲು ಒಂದು ಗಂಟೆ ಹಿಡಿದಿದೆ.