Wednesday, 30th October 2024

ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ವಾಗಿದೆ. ಕನ್ನಡ ಭಾಷೆ, ಸಾಹಿತ್ಯವನ್ನು ಜನಪ್ರಿಯಗೊಳಿಸಲು ಅವರು ಮಾಡಿದ್ದ ಕೆಲಸ ಅಪರಿಮಿತ.. ಕೆಲಸದ ಬಗ್ಗೆ ಅಪಾರ ಒಲವು ಹೊಂದಿದ್ದ ಅವರು ಯುವಜನತೆಗೆ ಪ್ರೇರಣೆಯಾಗಿದ್ದರು.

ಅವರ ನಿಧನ ಸಂದರ್ಭದಲ್ಲಿ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.