Wednesday, 23rd October 2024

ಚಿತ್ರರಂಗಕ್ಕೆ ಬಿಗ್ ಶಾಕ್: ಶುಕ್ರವಾರದಿಂದ ಚಿತ್ರಮಂದಿರಗಳು ಬಂದ್ ?‌

ಬೆಂಗಳೂರು : ಕರೋನಾ ಲಾಕ್ಡೌನ್ ನಿಂದಾಗಿ ತತ್ತರಿಸಿರುವ ಚಿತ್ರರಂಗಕ್ಕೆ ಮತ್ತೊಂದು ಬಿಗ್ ಶಾಕ್. ರಾಜ್ಯದಲ್ಲಿ ಶುಕ್ರವಾರ ದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಪ್ರದರ್ಶಕರು ನಿರ್ಧರಿಸಿದ್ದಾರೆನ್ನಲಾಗಿದೆ.

ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಪ್ರೇಕ್ಷಕರು ಹೆಚ್ಚಿನ ಸಂಖ್ಯೆ ಯಲ್ಲಿ ಬರುತ್ತಿಲ್ಲ. ಹೀಗಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು ಎಂದು ಪ್ರದರ್ಶಕರ ವಲಯದ ಅಧ್ಯಕ್ಷ ಕೆ. ಚಂದ್ರಶೇಖರ್ ಹೇಳಿದ್ದಾರೆ.

ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರು ಬರುತ್ತಿಲ್ಲ. ರಾಜ್ಯದಲ್ಲಿ ಈಗಾಗಲೇ 650 ಕ್ಕೂ ಹೆಚ್ಚು ಚಿತ್ರ ಮಂದಿರ ಗಳು ಮುಚ್ಚಿವೆ. ಥಿಯೇಟರ್ ಗಳು ತೀವ್ರ ನಷ್ಟ ಅನುಭವಿಸುತ್ತಿವೆ. ಹೀಗಾಗಿ, ಶುಕ್ರವಾರದಿಂದ ಎಲ್ಲ ಚಿತ್ರಮಂದಿರಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.