ನವದೆಹಲಿ: ಕೋವಿಡ್ ಎರಡನೇ ಅಲೆಯಿಂದಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಏರ್ಪಟ್ಟಿದ್ದರೆ, ಮತ್ತೊಂದು ಕಡೆ ಕರ್ಫ್ಯೂ, ಲಾಕ್ಡೌನ್ನಿಂದಾಗಿ ಬಡ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರ ನೆರವಿಗೂ ಧಾವಿಸುವ ಹಿನ್ನಲೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡ ಜನರಿಗೆ ಉಚಿತವಾಗಿ ಆಹಾರ ಧಾನ್ಯ ನೀಡಲು ತೀರ್ಮಾನಿಸಿದೆ. ಮೇ ಮತ್ತು ಜೂನ್ ಎರಡು ತಿಂಗಳ ಆಹಾರ ಧಾನ್ಯಗಳನ್ನು ಬಡ ಕೂಲಿಕಾರ್ಮಿಕ ವರ್ಗದವರಿಗೆ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಎರಡನೇ ಅಲೆ ಕೋವಿಡ್ ಸೋಂಕನ್ನು ಎದುರಿಸುತ್ತಿರುವಾಗ ಬಡವರಿಗೆ ಪೌಷ್ಠಿಕಾಂಶದ ಆಹಾರ ನೀಡುವುದು ಅತಿ ಮುಖ್ಯ. ಇದೇ ಹಿನ್ನಲೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಐದು ಕೆಜಿ ಅಕ್ಕಿ ಮತ್ತು ಆಹಾರ ಧಾನ್ಯವನ್ನು ದೇಶದ ಬಡ ಜನರಿಗೆ ನೀಡಲಾಗುವುದು. 80 ಕೋಟಿ ಫಲಾನುಭವಿಗಳಿಗೆ ಈ ಯೋಜನೆ ತಲುಪಲಿದೆ. ಸರ್ಕಾರ 26 ಸಾವಿರ ಕೋಟಿ ರೂ ವ್ಯಯಿಸಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.