Saturday, 23rd November 2024

18 ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದವರೆಗಿನ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಸೋಮವಾರ ಕರೋನಾ ಸೋಂಕು ತಡೆಗಟ್ಟುವ ಸಂಬಂಧ ಸಚಿವ ಸಂಪುಟ ಸಭೆ ನಡೆಸಿದ ಯಡಿಯೂರಪ್ಪನವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಮೇ 1ರಿಂದ 18 ರಿಂದ 45 ವರ್ಷದೊಳಗಿನವರಿಗೆ ಕೊರೊನಾ ಲಸಿಕೆಯನ್ನು ಉಚಿತ ನೀಡಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ 65 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ಸಿಗಲಿದೆ ಎಂದು ತಿಳಿಸಿದ್ದಾರೆ. ಏ.28ರಿಂದ ನೋಂದಣಿ ಆರಂಭವಾಗಲಿದ್ದು, ಎಲ್ಲರೂ ಲಸಿಕೆ ಪಡೆಯುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಜನವರಿ 16ರಿಂದ ದೇಶಾದ್ಯಂತ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಅಭಿಯಾನದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಅಭಿಯಾನದ ಎರಡನೇ ಹಂತದ ಮೊದಲ ಭಾಗದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಎರಡನೇ ಭಾಗದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು.

ಭಾರತದಲ್ಲಿ ಸದ್ಯಕ್ಕೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್‌ ಲಸಿಕೆ ನೀಡಲಾಗುತ್ತಿದ್ದು, ರಷ್ಯಾದ ಸ್ಫುಟ್ನಿಕ್ ವಿ ಲಸಿಕೆಗೂ ಅನು ಮೋದನೆ ದೊರೆತಿದೆ. ಶೀಘ್ರವೇ ಸ್ಫುಟ್ನಿಕ್ ವಿ ಲಸಿಕೆ ಭಾರತದಲ್ಲಿ ನೀಡಲಾಗುವುದು ಎಂದು ಕೇಂದ್ರ ತಿಳಿಸಿದೆ.

ಉಚಿತ ಲಸಿಕೆ ನೀಡುತ್ತಿರುವ ರಾಜ್ಯಗಳು: ಹದಿನೇಳು ರಾಜ್ಯಗಳು ತಮ್ಮ ಜನರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿ ದ್ದವು. ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗೋವಾ, ಕೇರಳ, ಛತ್ತೀಸ್‌ಗಡ, ಜಾರ್ಖಂಡ್, ಸಿಕ್ಕಿಂ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಹರಿಯಾಣ, ಅಸ್ಸಾಂ, ಉತ್ತರ ಪ್ರದೇಶ, ಬಿಹಾರ ರಾಜ್ಯಗಳು ಘೋಷಿಸಿ ದ್ದವು.