ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ ತೆಗೆದುಕೊಂಡ ಬಳಿಕ ಚುನಾವಣಾ ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ದೇಶದಲ್ಲಿ ಕರೋನಾ ವೈರಸ್ ಇರುವಾಗಲೇ ಚುನಾವಣಾ ರ್ಯಾಲಿ ಗಳಿಗೆ ಅನುಮತಿ ನೀಡಿದ್ದ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ದೇಶದಲ್ಲಿ ಕರೋನಾ ಎರಡನೇ ಅಲೆಗೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಕೊಲೆ ಕೇಸ್ ಹಾಕಬಹುದು ಎಂತಲೂ ಆಕ್ರೋಶ ಹೊರ ಹಾಕಿತ್ತು.