Saturday, 23rd November 2024

ಅಸ್ಸಾಂ, ಬಂಗಾಳದಲ್ಲಿ 6.4 ತೀವ್ರತೆಯ ಭೂಕಂಪನ

ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಬುಧವಾರ 6.4 ತೀವ್ರತೆಯ ಭೂಕಂಪನ ಸಂಭವಿಸಿ, ಅಸ್ಸಾಂ ಹಾಗೂ ಬಂಗಾಳದಲ್ಲಿ ವ್ಯಾಪಕ ಹಾನಿಯಾಗಿದೆ.

ಸೋನಿತ್ ಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಮೇಘಾಲಯ ಹಾಗೂ ಪಶ್ಚಿಮಬಂಗಾಳದ ಉತ್ತರ ಭಾಗಗಳು ಸೇರಿದಂತೆ ಇಡೀ ಪ್ರದೇಶದಲ್ಲಿ ನಡುಕ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಹೆಚ್ಚಿನ ತೀವ್ರತೆಯ ಭೂಕಂಪನ ದಿಂದಾಗಿ ಅಸ್ಸಾಂನ ಹಲವಾರು ಸ್ಥಳಗಳಲ್ಲಿ ರಸ್ತೆಗಳಲ್ಲಿ ಬಿರುಕು ಬಿಟ್ಟಿದ್ದು, ಮನೆಗಳು ಹಾಗೂ ಕಟ್ಟಡಗಳಿಗೆ ಹಾನಿಯಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ. ಯಾವುದೇ ಗಾಯ ಅಥವಾ ಸಾವು ಸಂಭವಿಸಿದ ಕುರಿತು ವರದಿಯಾಗಿಲ್ಲ.

ರಾಜ್ಯವು ಭೂಕಂಪನಕ್ಕೊಳಗಾದ ನಂತರ ಕೇಂದ್ರ ಸರಕಾರದಿಂದ ಅಸ್ಸಾಂಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.