Saturday, 23rd November 2024

2,40,842 ಹೊಸ ಕರೋನಾ ಪ್ರಕರಣ ಪತ್ತೆ, 3,741 ಮಂದಿ ಸಾವು

#corona

ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,40,842 ಮಂದಿಗೆ ಹೊಸದಾಗಿ ವೈರಸ್ ಸೋಂಕು ದೃಢಪಟ್ಟಿದೆ.

ಈ ಮೂಲಕ ಸೋಂಕಿತರ ಸಂಖ್ಯೆ 2,65,30,132 ಕ್ಕೆ ಏರಿಕೆಯಾಗಿದೆ. 3,741 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,99,266ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

3,55,102 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರದವರ ಸಂಖ್ಯೆ 2,34,25,467 ಕ್ಕೆ ಏರಿಕೆಯಾಗಿದೆ.