ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,22,315 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 2,67,52,447 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 4,454 ಮಂದಿ ಮೃತಪಟ್ಟಿದ್ದು, ಸೋಂಕಿ ನಿಂದ ಮೃತಪಟ್ಟವರ ಸಂಖ್ಯೆ 3,03,720 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 3,02,544 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 27,20,716 ಸಕ್ರಿಯ ಪ್ರಕರಣಗಳು ಇವೆ.