Thursday, 19th September 2024

ತೈಲ ದರ ಏರಿಕೆ: ಮುಂಬೈನಲ್ಲಿ 100 ರೂ, ಬೆಂಗಳೂರಿನಲ್ಲಿ 96.14 ರೂ,

ನವದೆಹಲಿ: ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ.

ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿದೆ. ಮಂಗಳವಾರ ನವದೆಹಲಿಯಲ್ಲಿ ಡೀಸೆಲ್ ದರ 84 ರೂಪಾಯಿ ದಾಟಿದೆ. ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 100 ರೂಪಾಯಿ ಹಾಗೂ ಬೆಂಗಳೂರಿನಲ್ಲಿ 96.14 ರೂ ಗೆ ತಲುಪಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್ ಗೆ 23 ಪೈಸೆ, ಡಿಸೆಲ್ ಗೆ 25 ಪೈಸೆ ಹೆಚ್ಚಳ ಮಾಡಿವೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವು ನಗರಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದ್ದು, ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 99.71 ರೂಪಾಯಿ, ಡೀಸೆಲ್ ದರ 91.57 ರೂ. ಇದೆ.