ಮುಂಬೈ/ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,86,364 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3660 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕರೋನಾ ಪ್ರಕರಣದಲ್ಲಿ ಇಳಿಮುಖವಾಗುತ್ತಿದೆ.
ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.75 ಕೋಟಿ ದಾಟಿದ್ದು, ಸಾವಿನ ಸಂಖ್ಯೆ 3,18,895ಕ್ಕೆ ಜಿಗಿತ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಕಳೆದ 24 ಗಂಟೆಯಲ್ಲಿ 2,59,459 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಸಂಖ್ಯೆ 2,48,93,410ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,43,152ಕ್ಕೆ ಇಳಿಕೆಯಾಗಿದೆ.