Tuesday, 26th November 2024

ಅಮೃತಮತಿಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಹದಿಮೂರನೇ ಶತಮಾನದ ಕನ್ನಡ ಕವಿ ಜನ್ನನ ‘ಯಶೋಧರ ಚರಿತೆಯನ್ನು ಆಧರಿಸಿ ನಿರ್ಮಾಣವಾಗಿರುವ ‘ಅಮೃತ ಮತಿ ಚಿತ್ರಕ್ಕೆ ವಿದೇಶಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅಪಾರ ಮನ್ನಣೆ ಸಿಗುತ್ತಿದೆ.

ಇಲ್ಲಿಯವರೆಗೆ ಅಮೃತಮತಿ ಹತ್ತು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಇತ್ತೀಚೆಗೆ ನಡೆದ ‘ಲಾಸ್ ಏಂಜಲೀಸ್
ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾವಿಭಾಗಕ್ಕೆ ಆಯ್ಕೆಯಾಗಿದ್ದ, ‘ಅಮೃತಮತಿ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನ ವಾಗಿದೆ. ಜತೆಗೆ ಚಿತ್ರಕಥೆ ರಚನೆಗಾಗಿ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರಿಗೂ ಪ್ರಶಸ್ತಿ ಲಭಿಸಿದೆ. ಈ ಹಿಂದೆ ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಅಮೃತಮತಿಗೆ ಅತ್ಯುತ್ತಮ ವಿದೇಶಿಭಾಷಾ ಚಿತ್ರ ಪ್ರಶಸ್ತಿ ಲಭಿಸಿತ್ತು.

ನಟಿ ಹರಿಪ್ರಿಯಾ ಈ ಎರಡು ಚಿತ್ರೋತ್ಸವಗಳಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದರು. ಅಮೃತಮತಿ ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ನಲ್ಲಿ ನಿರ್ಮಾಣಗೊಂಡಿದೆ. ಕಿಶೋರ್, ತಿಲಕ್, ಸುಂದರರಾಜ್, ಪ್ರಮೀಳಾ ಜೋ?ಯ್, ಸುಪ್ರಿಯಾರಾವ್, ಅಂಬರೀಶ್
ಸಾರಂಗಿ, ವತ್ಸಲಾ ಮೋಹನ್ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ನಾಗರಾಜ್ ಆದವಾನಿ ಛಾಯಾಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ನಿರ್ದೇಶನವಿದೆ. ಕರೋನಾ ಬಳಿಕ ಅಮೃತಮತಿ ತೆರೆಗೆ ಬರಲಿದೆ.

***

ನಾನು ನಿರ್ದೇಶಿಸಿದ ಕೆಲವು ಚಿತ್ರಗಳು ಉತ್ತಮ ಚಿತ್ರ ಪ್ರಶಸ್ತಿ ಪಡೆದಿವೆ. ನನಗೆ ನಿರ್ದೇಶನಕ್ಕಾಗಿ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯೂ
ಬಂದಿದೆ. ನಾನು ರಚಿಸಿದ ಕಥೆ, ಗೀತೆ, ಸಂಭಾಷಣೆಗಳಿಗೂ ಪ್ರಶಸ್ತಿಗಳು ಲಭ್ಯವಾಗಿವೆ. ಆದರೆ ಇಲ್ಲಿಯವರೆಗೆ ನಾನು ರಚಿಸಿದ ಚಿತ್ರಕಥೆಗೆ ಪ್ರಶಸ್ತಿ ಲಭಿಸಿರಲಿಲ್ಲ. ಲಾಸ್ ಏಂಜಲೀಸ್ ಅಂತರರಾಷ್ಟ್ರ್ರೀಯ ಚಿತ್ರೋತ್ಸವದಲ್ಲಿ ಮೊಟ್ಟ ಮೊದಲ ಬಾರಿಗೆ ಚಿತ್ರಕಥೆಗಾಗಿ ನನಗೆ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ.
-ಬರಗೂರು ರಾಮಚಂದ್ರಪ್ಪ,ನಿರ್ದೇಶಕ