Saturday, 23rd November 2024

ದೆಹಲಿಯಲ್ಲಿ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಿಕೆ

Arvind Kejrival

ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂ.7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಆದರೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ತಿಳಿಸಿದ್ದಾರೆ.

ಜೂ.7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಪುನರಾರಂಭಗೊಳ್ಳಲಿದೆ. ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಕೂಡ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಅನ್ನು ಹೆಚ್ಚು ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಮೂಲಕ ಇತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಸಮ-ಬೆಸ ಆಧಾರದಲ್ಲಿ ಮಾರುಕಟ್ಟೆ ಮತ್ತು ಮಾಲ್ಸ್ ಗಳನ್ನು ತೆರೆಯಲು ಅನುವು ಮಾಡಿಕೊಡಲಾಗುವುದು. ಖಾಸಗಿ ಕಚೇರಿ ಗಳಲ್ಲಿಯೂ ಶೇ.50ರಷ್ಟು ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ವಿವರ ನೀಡಿದ್ದಾರೆ.

ಒಂದು ವೇಳೆ ಹೊಸ ರೂಪಾಂತರ ತಳಿ ಪತ್ತೆಯಾದರೆ ಅದರ ಬಗ್ಗೆ ಪರಿಶೀಲನೆ ನಡೆಸಲು ಲ್ಯಾಪ್ ಅನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.