ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಇದೇ ವೇಳೆ ದೇಶದಲ್ಲಿ 2677 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು, ಒಟ್ಟು ಸಂಖ್ಯೆ 3,46,759ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 1,89,232 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 2,69,84,781ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,13,22,417 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.