Thursday, 12th December 2024

ದೆಹಲಿ ಆಸ್ಪತ್ರೆಗಳಲ್ಲಿ ಸಂವಹನಕ್ಕೆ ಮಲಯಾಳಂ ಭಾಷೆ ಬಳಸುವಂತಿಲ್ಲ

ನವದೆಹಲಿ: ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಮಲಯಾಳಂ ಭಾಷೆ ಬಳಸು ವಂತಿಲ್ಲ ಎಂದು ನವದೆಹಲಿಯ ಸರ್ಕಾರಿ ಆಸ್ಪತ್ರೆ ಸೂಚನೆ ನೀಡಿದೆ.

ಆಸ್ಪತ್ರೆಯಲ್ಲಿ ನರ್ಸ್ ಗಳು ಮಲಯಾಳಂ ಭಾಷೆ ಮಾತನಾಡುವುದರಿಂದ ಗೊಂದಲ ಉಂಟಾಗುತ್ತಿತ್ತು. ಈ ಸಂಬಂಧ ದೆಹಲಿ ಸರ್ಕಾರಿ ಆಸ್ಪತ್ರೆ ಸುತ್ತೋಲೆ ಹೊರಡಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗುವ ಬಹುತೇಕ ರೋಗಿಗಳಿಗೆ ಮತ್ತು ಸಹೋದ್ಯೋಗಿಗಳಿಗೆ ಈ ಭಾಷೆ ತಿಳಿದಿಲ್ಲ. ಹಾಗಾಗಿ ಕರ್ತವ್ಯ ನಿರತ ಕೇರಳ ಮೂಲದ ದಾದಿಯರು ಮಲಯಾಳಂ ಬದಲು ಹಿಂದಿ ಹಾಗೂ ಆಂಗ್ಲ ಭಾಷೆಯಲ್ಲೇ ಸಂವಹನ ಮಾಡುವಂತೆ ಆದೇಶಿಸಲಾಗಿದೆ.

ಗೋವಿಂದ್ ವಲ್ಲಭ್ ಪಂತ್ ಇನ್ಸ್ಟಿಟ್ಯೂಟ್ ಆಫ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಹೊರಡಿಸಿದ ಸುತ್ತೋಲೆಯಲ್ಲಿ ದಾದಿಯರು ಸಂವಹನಕ್ಕಾಗಿ ಹಿಂದಿ ಹಾಗೂ ಇಂಗ್ಲಿಷ್ ಭಾಷೆಯನ್ನು ಮಾತ್ರ ಬಳಸುವಂತೆ ತಿಳಿಸಲಾಗಿದೆ.