Saturday, 23rd November 2024

ಕರೋನಾ ಪ್ರಕರಣದಲ್ಲಿ ಇಳಿಕೆ: ರಾಜ್ಯಗಳಲ್ಲಿ ಚಟುವಟಿಕೆಗಳು ಪುನರಾರಂಭ

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಎರಡು ತಿಂಗಳ ಬಳಿಕ ಹಲವು ರಾಜ್ಯಗಳಲ್ಲಿ ಮತ್ತೆ ಚಟುವಟಿಕೆಗಳು ಪುನರಾರಂಭಗೊಳ್ಳ ತೊಡಗಿದೆ.

ಸೋಮವಾರದಿಂದ ದೆಹಲಿ, ಮುಂಬೈ, ಜಮ್ಮು-ಕಾಶ್ಮೀರ ಮತ್ತು ತಮಿಳುನಾಡಿ ನಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಆರಂಭ ಗೊಂಡಿದೆ ಎಂದು ವರದಿ ತಿಳಿಸಿದೆ.

ದೆಹಲಿಯಲ್ಲಿ ಮಾಲ್ ಗಳಲ್ಲಿರುವ ಅಂಗಡಿ, ಮಾರುಕಟ್ಟೆ, ಕಾಂಪ್ಲೆಕ್ಸ್ ಗಳು, ಕಿರಾಣಿ ಅಂಗಡಿಗಳನ್ನು ಸಮ-ಬೆಸ ಮತ್ತು ಸಮಯದ ನಿರ್ಬಂಧಗಳೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ದೆಹಲಿ ಮೆಟ್ರೋ ಕೂಡ ಶೇ.50ರಷ್ಟು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಕಾರ್ಯಾರಂಭಿಸ ಲಿದೆ. ಅಲ್ಲದೇ ಖಾಸಗಿ ಕಚೇರಿಗಳಲ್ಲಿಯೂ ಶೇ.50ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣ ಮತ್ತು ಆಸ್ಪತ್ರೆಗಳಲ್ಲಿ ಬೆಡ್ ಗಳ ಲಭ್ಯತೆಯ ಆಧಾರದ ಮೇಲೆ ಐದು ಹಂತ ಗಳಲ್ಲಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಲು ನಿರ್ಧರಿಸಿದೆ. ಮುಂಬೈನಲ್ಲಿ ಇಂದಿನಿಂದ ರೆಸ್ಟೋರೆಂಟ್ಸ್, ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ.

ವಾರಣಾಸಿ, ಮುಜಾಫರ್ ನಗರ್, ಗೌತಮ್ ಬುದ್ಧ ನಗರ ಮತ್ತು ಗಾಜಿಯಾ ಬಾದ್ ನ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಅಂಗಡಿ ಮತ್ತು ಮಾರುಕಟ್ಟೆ ತೆರೆ ಯಲು ಉತ್ತರಪ್ರದೇಶ ಸರ್ಕಾರ ಅನುಮತಿ ನೀಡಿದೆ. ತಮಿಳುನಾಡಿನಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸ ಲಾಗಿದೆ. ಕೊಯಂಬತ್ತೂರು ಸೇರಿದಂತೆ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಅಂಗಡಿ, ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.